ADVERTISEMENT

ನೋಂದಣಿ ಕಡ್ಡಾಯ: ಸ್ಪಷ್ಟನೆಗೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 23:27 IST
Last Updated 14 ಆಗಸ್ಟ್ 2020, 23:27 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಅಂತರ ರಾಜ್ಯ ಪ್ರಯಾಣಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ನೋಂದಣಿ ಕಡ್ಡಾಯದ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಅನ್‌ಲಾಕ್‌–3ರ ಮಾರ್ಗಸೂಚಿ ಪ್ರಕಾರ ಅಂತರ ರಾಜ್ಯ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಿದ್ದರೂ ಹೊಸೂರು ಬಳಿಯ ತಮಿಳುನಾಡು ಗಡಿಯಲ್ಲಿ ರಾಜ್ಯದ ಅಧಿಕಾರಿಗಳು ನಿರ್ಬಂಧಿಸುತ್ತಿದ್ದಾರೆ ಎಂದು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರ ಜುಲೈ 8ರಂದು ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿ
ಕೊಳ್ಳುವುದು ಕಡ್ಡಾಯ. ತಮಿಳುನಾಡು ಗಡಿಯಿಂದ ಕೆಲಸಕ್ಕೆ ಬರುವ ಅಸಂಘಟಿತ ಕಾರ್ಮಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಆದೇಶವನ್ನು ವಜಾಗೊಳಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.