ADVERTISEMENT

ರಾಷ್ಟ್ರೀಯ ಶಿಕ್ಷಣ ನೀತಿ ತಿರಸ್ಕಾರ ಸರಿಯಲ್ಲ: .ಎಂ.ಆರ್. ದೊರೆಸ್ವಾಮಿ

​ಪ್ರಜಾವಾಣಿ ವಾರ್ತೆ
Published 8 ಜೂನ್ 2023, 20:22 IST
Last Updated 8 ಜೂನ್ 2023, 20:22 IST
ಡಾ. ಎಂ.ಆರ್. ದೊರೆಸ್ವಾಮಿ
ಡಾ. ಎಂ.ಆರ್. ದೊರೆಸ್ವಾಮಿ   

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಕೌಶಲ ವೃದ್ಧಿ, ಸಂಶೋಧನೆಗಳಿಗೆ ಪೂರಕವಾಗಿದೆ. ಹಾಗಾಗಿ, ಗೊಂದಲ ಸೃಷ್ಟಿಸದೆ ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಬೇಕು’ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಮಾಜಿ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ಹೇಳಿದರು. 

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಈಗಾಗಲೇ ಜಾರಿ ಮಾಡಲಾಗಿದೆ. ಇದರಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಹಂತ ಹಂತವಾಗಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಬೇಕಾಗುತ್ತದೆ. ಇದಕ್ಕೆ ಹಲವಾರು ಆಯಾಮಗಳಿವೆ. ಇದನ್ನು ತಿರಸ್ಕರಿಸುತ್ತೇವೆ ಎನ್ನುವುದು ಸರಿಯಲ್ಲ. ಕೇಂದ್ರ ಸರ್ಕಾರವು ಒಂದು ಕಾಯ್ದೆಯನ್ನು ಜಾರಿ ಮಾಡಿದಾಗ ಅದನ್ನು ರಾಜ್ಯ ಸರ್ಕಾರ ರದ್ದು ಮಾಡಲು ಬರುವುದಿಲ್ಲ’ ಎಂದು ಹೇಳಿದರು. 

‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಾರಿ ಮಾಡಲಾದ ಈ ನೀತಿಗೆ, ದೇಶದ ಪ್ರಮುಖ ಶಿಕ್ಷಣ ತಜ್ಞರು ಶ್ರಮಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡದೆಯೇ, ಸರಿ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಸುವವರಾಗಬೇಕು ಎಂಬುದು ಈ ನೀತಿಯ ಆಶಯ. ಇದರಿಂದ ನವೋದ್ಯಮಕ್ಕೆ ಪ್ರೋತ್ಸಾಹ ಸಿಗುತ್ತಿದೆ. ಸರ್ಕಾರ ಬದಲಾದಂತೆ ಶಿಕ್ಷಣ ನೀತಿಗಳನ್ನು ಬದಲಾಯಿಸಬಾರದು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.