ADVERTISEMENT

ವೃಷಭಾವತಿ ನದಿ ಪುನಶ್ಚೇತನ: ಸಭೆ ನಡೆಸಲು ಹೈಕೋರ್ಟ್ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 22:18 IST
Last Updated 15 ಜೂನ್ 2021, 22:18 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ವೃಷಭಾವತಿ ನದಿ ಪುನಶ್ಚೇತನ ಸಂಬಂಧ ಎಲ್ಲ ಸಹಭಾಗಿ ಸಂಸ್ಥೆಗಳ ಸಭೆ ನಡೆಸುವಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ವಕೀಲರಾದ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ರಾಷ್ಟ್ರೀಯ ಪರಿಸರ ಮತ್ತು ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (ನೀರಿ) ಸಲ್ಲಿಸಿರುವ ಮಧ್ಯಂತರ ವರದಿಯ ಶಿಫಾರಸುಗಳ ಬಗ್ಗೆ ಚರ್ಚೆ ನಡೆಸಿ’ ಎಂದು ತಿಳಿಸಿದೆ. ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿತು.

‘ವೃಷಭಾವತಿ ಪುನರುಜ್ಜೀವನದ ಬಗ್ಗೆ ನೀರಿ ವರದಿ ಸಲ್ಲಿಸಿದೆ. ಇದನ್ನು ಆಧರಿಸಿ ಸರ್ವೆ ನಡೆಸಿ ನದಿಯ ಬಫರ್ ವಲಯವನ್ನು ಗುರುತಿಸಬೇಕು’ ಎಂದು ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿಗಳಿಗೆ ತಿಳಿಸಿತು.

ADVERTISEMENT

‘ಒತ್ತುವರಿ ತೆರವು ಮಾಡಬೇಕು. ನದಿಗೆ ಹರಿಬಿಡುವ ತ್ಯಾಜ್ಯ ತಡೆಯಬೇಕು’ ಎಂದು ನೀರಿ ತನ್ನ ವರದಿಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.