ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ: ವಿಚಾರಣೆಗೆ ನಟ ದರ್ಶನ್ ಗೈರು

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2025, 15:11 IST
Last Updated 8 ಏಪ್ರಿಲ್ 2025, 15:11 IST
<div class="paragraphs"><p> ನಟ ದರ್ಶನ್ </p></div>

ನಟ ದರ್ಶನ್

   

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ಮಂಗಳವಾರ ನಡೆಯಿತು. ನಟ ದರ್ಶನ್ ಹೊರತು ಪಡಿಸಿ ಎಲ್ಲ ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು. 

‘ತೀವ್ರ ಬೆನ್ನು ನೋವಿನಿಂದಾಗಿ ದರ್ಶನ್ ಹಾಜರಾಗಲು ಸಾಧ್ಯವಿಲ್ಲ’ ಎಂದು ನಟನ ಪರ ವಕೀಲರು ತಿಳಿಸಿದರು. ಇದಕ್ಕೆ ಅಸಮಾಧಾನದ ವ್ಯಕ್ತಪಡಿಸಿದ ನ್ಯಾಯಾಧೀಶರು, ‘ಮುಂದೆ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಬೇಕು’ ಎಂದು ಸೂಚನೆ ನೀಡಿದರು.

ADVERTISEMENT

ಮೇ 20ಕ್ಕೆ ವಿಚಾರಣೆ ಮುಂದೂಡಲಾಯಿತು. ವಿಚಾರಣೆ ಬಳಿಕ ಹೊರಗೆ ಬಂದ ಪವಿತ್ರಾ ಗೌಡ ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ, ‘ಏನು ಹೇಳಲಿ’ ಎಂದಷ್ಟೇ ಉತ್ತರಿಸಿ ಕಾರು ಹತ್ತಿ ಹೊರಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.