ರೇಣುಕಸ್ವಾಮಿ, ದರ್ಶನ್
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಸಂಬಂಧ 57ನೇ ಎಸಿಎಂಎಂ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು, 132 ಪುಟಗಳ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
2024ರ ಜೂನ್ 8ರಂದು ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಸ್ವಾಮಿ ಅವರ ಕೊಲೆ ನಡೆದಿತ್ತು. ಕೊಲೆಯ ಆರೋಪದ ಮೇರೆಗೆ ದರ್ಶನ್, ಪವಿತ್ರಾಗೌಡ ಸೇರಿ 17 ಆರೋಪಿಗಳನ್ನು ಜೂನ್ 11ರಂದು ಪೊಲೀಸರು ಬಂಧಿಸಿದ್ದರು. ತನಿಖೆ ನಡೆಸಿ 90 ದಿನಗಳ ಒಳಗೆ ದೋಷಾರೋಪ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದರು. ಇದೀಗ ಕೆಲವು ಸಾಕ್ಷ್ಯಾಧಾರ ಸಹಿತ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
‘ಕೆಲವು ಮಹತ್ವದ ಸಾಕ್ಷ್ಯ ಗಳನ್ನು ಉಲ್ಲೇಖ ಮಾಡಲಾಗಿದೆ. ಕೃತ್ಯ ನಡೆದ ದಿನ ಆರೋಪಿಗಳು ತೆಗೆದುಕೊಂಡಿದ್ದ ಫೋಟೊಗಳನ್ನು ಡಿಲಿಟ್ ಮಾಡಿದ್ದರು. ಆರೋಪಿ ಗಳ ಮೊಬೈಲ್ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿತ್ತು. ಕೆಲವು ಫೋಟೊಗಳು ಈಗ ಮರುಸಂಗ್ರಹವಾಗಿದ್ದು, ಫೋಟೊ ಸಹಿತ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.