
ಪ್ರಜಾವಾಣಿ ವಾರ್ತೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 11ನೇ ಆರೋಪಿ ನಾಗರಾಜು ಅವರಿಗೆ 57ನೇ ಸಿಸಿಎಚ್ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಪತ್ನಿಯ ಅನಾರೋಗ್ಯದ ಕಾರಣ ನೀಡಿ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಕೆಲ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದರು. ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ಕಾಮಾಕ್ಷಿಪಾಳ್ಯ ಠಾಣೆಗೆ ತೆರಳಿ ಸಹಿ ಹಾಕಲು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.