ADVERTISEMENT

ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ: ಬಂಧಿತ 13 ಜನ ಯಾರು?

ಬಂಧಿತರಿಗೆ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯ ಸೆಲ್‌ನಲ್ಲೇ ವೈದ್ಯಕೀಯ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2024, 10:02 IST
Last Updated 11 ಜೂನ್ 2024, 10:02 IST
<div class="paragraphs"><p>ನಟ ದರ್ಶನ್</p></div>

ನಟ ದರ್ಶನ್

   

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಸೇರಿದಂತೆ 13 ಆರೋಪಿಗಳಿಗೆ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಬೌರಿಂಗ್‌ ಆಸ್ಪತ್ರೆಗೆ ಆರೋಪಿಗಳನ್ನು ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರು ನಿರ್ಧರಿಸಿದ್ದರು. ಆದರೆ ಭದ್ರತೆ ದೃಷ್ಟಿಯಿಂದ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ವೈದ್ಯರನ್ನು ಕರೆಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ದರ್ಶನ್‌ ಸ್ನೇಹಿತ ವಿ.ವಿನಯ್, ದರ್ಶನ್‌ ಮ್ಯಾನೇಜರ್‌ ಆರ್.ನಾಗರಾಜು, ಎಂ.ಲಕ್ಷ್ಮಣ್​, ಎಸ್​.ಪ್ರದೋಶ್​, ಕೆ.ಪವನ್, ದೀಪಕ್​ ಕುಮಾರ್, ನಂದೀಶ್​, ಕಾರ್ತಿಕ್​, ನಿಖಿಲ್ ನಾಯಕ್​, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್​ ರಾಘು ಬಂಧಿತ ಇತರೆ ಆರೋಪಿಗಳು.

ಎಲ್ಲ ಆರೋಪಿಗಳನ್ನು ಸಂಜೆ 4.30ಕ್ಕೆ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಪೊಲೀಸರು ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ. ಬಂಧಿತರ ಪೈಕಿ ಹೆಚ್ಚಿನವರು ದರ್ಶನ್‌ ಅವರ ಬಾಡಿಗಾರ್ಡ್‌ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.