ಕೋರ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಉಳಿದ ಐವರು ಆರೋಪಿಗಳಿಗೆ ಸೆಷನ್ಸ್ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲ 17 ಮಂದಿಗೆ ಜಾಮೀನು ದೊರೆತಂತಾಗಿದೆ.
ಆರೋಪಿಗಳಾದ ಪವನ್, ರಾಘವೇಂದ್ರ, ನಂದೀಶ್, ಧನರಾಜ್ ಹಾಗೂ ವಿನಯ್ ಅವರಿಗೆ 57ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
₹1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ ಒದಗಿಸಬೇಕು. ಕೋರ್ಟ್ ವಿಚಾರಣೆಗೆ ಗೈರಾಗುವಂತಿಲ್ಲ. ಪ್ರತ್ಯಕ್ಷ, ಪರೋಕ್ಷವಾಗಿ ಸಾಕ್ಷಿದಾರರಿಗೆ ಬೆದರಿಕೆ ಹಾಕಬಾರದು ಹಾಗೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಕೂಡದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.