ಬೆಂಗಳೂರು: ‘ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಗೌರವ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನೇ.ಭ. ರಾಮಲಿಂಗ ಶೆಟ್ಟಿ ಅವರ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಸೂಕ್ತ ಸಮಯದಲ್ಲಿ ಉತ್ತರಿಸಲಾಗುವುದು’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.
‘ಅವರನ್ನು ಗೌರವ ಕಾರ್ಯದರ್ಶಿ ಸ್ಥಾನದಿಂದ ಮುಕ್ತಗೊಳಿಸಲು ತೀರ್ಮಾನಿಸಲಾಗಿತ್ತು. ಈ ವಜಾದಿಂದ ತಪ್ಪಿಸಿಕೊಳ್ಳಲು ಅವರು ರಾಜೀನಾಮೆ ನೀಡಿ, ಹಲವು ಸುಳ್ಳು ಆರೋಪಗಳನ್ನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಕುರಿತು ಸಾಕ್ಷಿ, ಆಧಾರ ಸಹಿತ ಮುಂಬರುವ ಕಸಾಪ ಕಾರ್ಯಾಕಾರಿ ಸಮಿತಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ, ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಆ ನಿರ್ಧಾರವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರ ಗಮನಕ್ಕೆ ತರಲಾಗುತ್ತದೆ’ ಎಂದು ಹೇಳಿದ್ದಾರೆ.
‘ಕಾರ್ಯಕಾರಿ ಸಮಿತಿ ಸಭೆಯವರೆಗೂ ಅವರ ಆರೋಪಗಳಿಗೆ ಪ್ರತಿಕ್ರಿಯಿಸದೆ ಇರಲು ನಿರ್ಧರಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.