ADVERTISEMENT

ನಾಳೆ ರಾಜ್ಯ ವರದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 19:47 IST
Last Updated 16 ಡಿಸೆಂಬರ್ 2019, 19:47 IST

ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ‌ತಡೆ) ಕಾಯ್ದೆ 1989 ಅನುಷ್ಠಾನದ 2018ನೇ ಸಾಲಿನ ರಾಜ್ಯ‌ ವರದಿ ಬಿಡುಗಡೆ ಕಾರ್ಯಕ್ರಮ ಇದೇ 18ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅಂಬೇಡ್ಕರ್‌ ಭವನದಲ್ಲಿ ನಡೆಯಲಿದೆ’ ಎಂದು ಎಸ್‌ಸಿ, ಎಸ್‌ಟಿಗಳಮೇಲ್ವಿಚಾರಣೆ ಮತ್ತು ಬಲವರ್ಧನೆ ಸಮಿತಿಯ ರಾಜ್ಯ ಸಂಚಾಲಕಿ ಪಿ.ಯಶೋಧ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮುದಾಯದವರ ಮೇಲೆ ದೇಶದಲ್ಲಿ ಪ್ರತಿ ಐದು ಗಂಟೆಗೊಂದು ದೌರ್ಜನ್ಯ, ಪ್ರತಿದಿನಕ್ಕೆ ಒಬ್ಬರ ಮೇಲೆ ಕೊಲೆ ಪ್ರಯತ್ನ ಹಾಗೂ ಎರಡು ದಿನಕ್ಕೆ ಒಬ್ಬ ದಲಿತ ಮತ್ತು ಆದಿವಾಸಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ’ ಎಂದರು.

‘ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇನ್ನೂ ಜೀವಂತವಾಗಿರುವ ಅಸ್ಪೃಶ್ಯತೆ ಕುರಿತು ಸಮೀಕ್ಷೆ ನಡೆಸಬೇಕು. ಎಲ್ಲ ಜಿಲ್ಲೆಗಳಲ್ಲೂ ಪ್ರತ್ಯೇಕ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಉಪಮುಖ್ಯಮಂತ್ರಿ ಗೋವಿಂದ ಕಾರಜೋಳಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯ್ಕ್ ವರದಿ ಬಿಡುಗಡೆ ಮಾಡಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.