ADVERTISEMENT

ಗಣರಾಜ್ಯೋತ್ಸವ: ಸಿದ್ಧತೆಗೆ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2024, 18:12 IST
Last Updated 18 ಜನವರಿ 2024, 18:12 IST
ತುಷಾರ್ ಗಿರಿನಾಥ್
ತುಷಾರ್ ಗಿರಿನಾಥ್   

ಬೆಂಗಳೂರು: ರಾಜ್ಯಮಟ್ಟದ ಗಣರಾಜ್ಯೋತ್ಸವ ದಿನಾಚರಣೆಗಾಗಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

2024ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅತಿ ಗಣ್ಯರು, ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ನಿಗದಿಪಡಿಸಿದ ದ್ವಾರದಲ್ಲಿ ಬರಬೇಕು. ವಾಹನಗಳ ಪಾರ್ಕಿಂಗ್ ಸ್ಥಳ ವಿಚಾರವಾಗಿ ಯಾವುದೇ ಲೋಪಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಕವಾಯತು ಪ್ರದರ್ಶನಕ್ಕೆ ಅಗತ್ಯ ಏರ್ಪಾಡು ಮಾಡಿಕೊಂಡು ಪೋಲೀಸ್ ಇಲಾಖೆಯ ಶಿಷ್ಟಾಚಾರದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ADVERTISEMENT

ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ವಲಯ ಆಯುಕ್ತೆ ಸ್ನೇಹಲ್, ಉಪ ಆಯುಕ್ತ ಮಂಜುನಾಥಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.