ADVERTISEMENT

ಗಣರಾಜ್ಯೋತ್ಸವ: ಕೆ.ಆರ್‌. ಪುರದಲ್ಲಿ ಧ್ವಜಾರೋಹಣ, ಸಾಧಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 19:52 IST
Last Updated 26 ಜನವರಿ 2023, 19:52 IST
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರನ್ನು ತಹಶೀಲ್ದಾರ್ ಎಸ್.ಆರ್.ಮಹೇಶ್ ಸನ್ಮಾನಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್.ರಾಮಮೂರ್ತಿ, ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಕೃಷ್ಣಪ್ಪ, ಬಿಬಿಎಂಪಿ ಮಾಜಿ ಸದಸ್ಯ ಪಿ.ಜೆ.ಅಂತೋಣಿಸ್ವಾಮಿ, ರವಿಕುಮಾರ್, ಕೆ.ಪಿ.ಕೃಷ್ಣ ಇದ್ದರು

ಕೆ.ಆರ್.ಪುರ: ‘ದೇಶದ ಪ್ರತಿಯೊಬ್ಬ ನಾಗರಿಕನೂ ನಿಸ್ವಾರ್ಥದಿಂದ, ರಾಷ್ಟ್ರಪ್ರೇಮದಿಂದ, ಉತ್ತಮ ಪ್ರಜೆಗಳಾಗಿ ನಡೆದುಕೊಂಡಾಗ ಮಾತ್ರ ಗಣರಾಜ್ಯೋತ್ಸವದ ಆಚರಣೆಗೆ ಅರ್ಥ ಬರುತ್ತದೆ’ ಎಂದು ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಎಸ್.ಆರ್.ಮಹೇಶ್ ಹೇಳಿದರು.

ಕೆ.ಆರ್.ಪುರದ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಬೆಂಗಳೂರನ್ನು ವಿಶ್ವದ ಅತ್ಯುತ್ತಮ ಡೈನಾಮಿಕ್ ಸಿಟಿ ಎಂದು ಘೋಷಿಸಲಾಗಿದೆ. ಮಾಹಿತಿ ತಂತ್ರಜ್ಞಾನ, ವೈಜ್ಞಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ಕಚೇರಿಗಳು ನಮ್ಮ ಪೂರ್ವ ತಾಲ್ಲೂಕಿನಲ್ಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT