ADVERTISEMENT

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ: ಪುಷ್ಪಗಳಲ್ಲಿ ಅರಳಲಿದ್ದಾರೆ ಮಹರ್ಷಿ ವಾಲ್ಮೀಕಿ

ಜನವರಿ 16 ರಿಂದ 26ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2024, 16:22 IST
Last Updated 30 ಡಿಸೆಂಬರ್ 2024, 16:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಆಯೋಜಿಸುವ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಮಹರ್ಷಿ ವಾಲ್ಮೀಕಿ’ ಅವರ ವಿಷಯಾಧಾರಿತ ಹೂವಿನ ಪ್ರತಿಕೃತಿ ಕಣ್ಮನ ಸೆಳೆಯಲಿದೆ.

‘ಗಣರಾಜ್ಯೋತ್ಸವದ ಅಂಗವಾಗಿ 2025ರ ಜನವರಿ 16 ರಿಂದ 26ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ರಾಮಾಯಣ ಮಹಾಕಾವ್ಯ ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಜೀವನವನ್ನು ಪುಷ್ಪಗಳಲ್ಲಿ ಕಟ್ಟಿಕೊಡಲು ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ. ಪುಷ್ಪ ಪ್ರದರ್ಶನ ಹೇಗಿರಬೇಕು ಎಂಬುದರ ಕುರಿತು ಈಗಾಗಲೇ ವಿಷಯ ತಜ್ಞರು, ಪರಿಣಿತರೊಂದಿಗೆ ಚರ್ಚೆ ನಡೆಸುತ್ತಿದ್ದೇವೆ’ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

‘ರಾಮಾಯಣ ಮಹಾಕಾವ್ಯದ ಪ್ರಮುಖ ಘಟನೆಗಳನ್ನು ಫಲಪುಷ್ಪ ಪ್ರದರ್ಶನದಲ್ಲಿ ಪ್ರಸ್ತುತಪಡಿಸಲಾಗುತ್ತದೆ. ವಾಲ್ಮೀಕಿ ಅವರ ಜೀವನದ ಪ್ರಮುಖ ಘಟನೆಗಳು, ಅವರು ರಾಮಾಯಣ ರಚಿಸುತ್ತಿರುವ ಪ್ರತಿಮೆಯನ್ನು ಹೂವಿನ ಲೋಕದ ಮೂಲಕ ತಿಳಿಸುವ ಪ್ರಯತ್ನ ಮಾಡಲಾಗುವುದು’ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ. ಜಗದೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಪ್ರದರ್ಶನಕ್ಕಾಗಿ ಕಟ್ ಫ್ಲವರ್ಸ್‌, ಇಲಾಖೆ ನರ್ಸರಿಗಳಲ್ಲಿ ವೈವಿಧ್ಯಮಯ ಪುಷ್ಪಗಳನ್ನು ಪಾಟ್‌ಗಳಲ್ಲಿ ಬೆಳೆಯಲಾಗುತ್ತದೆ. ಸನ್‌ಫ್ಲವರ್‌ನ ಕಟ್‌ ಫ್ಲವರ್ಸ್, ಶೀತ ಪ್ರದೇಶಗಳಲ್ಲಿ ಬೆಳೆಯುವ ಹೂಗಳು ಈ ಬಾರಿ ಆಕರ್ಷಣೆ ಆಗಲಿವೆ. ದೇಶ ಮತ್ತು ವಿದೇಶಗಳಿಂದ ವಿವಿಧ ತಳಿಯ ಹೂಗಳನ್ನು ಆಮದು ಮಾಡಿಕೊಳ್ಳಲಾಗುವುದು’ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.