ADVERTISEMENT

ಗಣರಾಜ್ಯೋತ್ಸವ | ತಳಮಟ್ಟದಲ್ಲಿ ಹಾರಿದ ಹೆಲಿಕಾಪ್ಟರ್‌: ದೂಳುಮಯವಾದ ಮೈದಾನ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 13:40 IST
Last Updated 26 ಜನವರಿ 2020, 13:40 IST
   

ಬೆಂಗಳೂರು: ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಭಾನುವಾರ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣದ ನಂತರ ರಾಷ್ಟ್ರಗೀತೆ ಮೊಳಗುತ್ತಿದ್ದಂತೆ, ಹೆಲಿಕಾಪ್ಟರ್‌ ಮೂಲಕ ರಾಷ್ಟ್ರಧ್ವಜಕ್ಕೆ ಪುಷ್ಪವೃಷ್ಟಿ ಮಾಡಲಾಯಿತು. ಆದರೆ, ಈ ವೇಳೆ ಸೇನಾ ಹೆಲಿಕಾಪ್ಟರ್‌ ಅತಿ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ್ದರಿಂದ ಮೈದಾನ ದೂಳುಮಯವಾಯಿತು.

ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಇತರೆ ಗಣ್ಯರ ಮೇಲೆ ಮಾತ್ರವಲ್ಲದೆ, ಸಾರ್ವಜನಿಕರ ಮೇಲೂ ದೂಳು ಹಾರಿತು.

ರಾಷ್ಟ್ರಗೀತೆ ಮುಗಿದ ಬಳಿಕ ಸಿಎಂ ಹಾಗೂ ರಾಜ್ಯಪಾಲರ ಬಳಿ ಬಂದ ಅಧಿಕಾರಿಗಳು, ಹದ್ದುಗಳು ಹಾರಾಡುತ್ತಿದ್ದುದರಿಂದ ಅನಿವಾರ್ಯವಾಗಿ ಹೆಲಿಕಾಪ್ಟರ್‌ ಹಾರಾಟದ ಎತ್ತರವನ್ನು ಕಡಿಮೆ ಮಾಡಬೇಕಾಯಿತು ಎಂದು ಸ್ಪಷ್ಟನೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.