ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ ‘2–ಎ’ ಪಟ್ಟಿಗೆ ಸೇರಿಸುವ ಪ್ರಮುಖ ನಿರ್ಣಯವನ್ನು ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆ ಕೈಗೊಳ್ಳುವ ಸಾಧ್ಯತೆ ಇದೆ.
ಸಚಿವ ಸಂಪುಟದ ಕಾರ್ಯಸೂಚಿಯಲ್ಲಿ ಈ ಪ್ರಸ್ತಾವವನ್ನು ಸೇರಿಸಲಾಗಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ, ಈ ಬಗ್ಗೆ ಮನವಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.