ADVERTISEMENT

ಉದ್ಯೋಗದಲ್ಲಿ ಕ್ರೀಡಾಳುಗಳಿಗೆ ಶೇ 2 ಮೀಸಲು: ಎಚ್‌.ಕೆ.ಪಾಟೀಲ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2024, 15:37 IST
Last Updated 1 ಫೆಬ್ರುವರಿ 2024, 15:37 IST
ಎಚ್‌.ಕೆ.ಪಾಟೀಲ
ಎಚ್‌.ಕೆ.ಪಾಟೀಲ   

ಬೆಂಗಳೂರು: ಏಳು ರಾಜ್ಯ ಸಿವಿಲ್‌ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ 2ರಷ್ಟು ಮೀಸಲಾತಿಗೆ ಅವಕಾಶ ನೀಡುವ ಕರ್ನಾಟಕ ಸಿವಿಲ್‌ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಕಾನೂನು ಸಚಿವ ಎಚ್‌.ಕೆ.ಪಾಟೀಲ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಾಧನೆ ಮಾಡಿದ ಪ್ರತಿಭಾವಂತರಿಗೆ ಶೇ 2ರಷ್ಟು ಸಮತಳ ಮೀಸಲಾತಿಯನ್ನು ಕಲ್ಪಿಸಲಾಗುವುದು. ಇದಕ್ಕಾಗಿ ನಿಯಮ 9ಕ್ಕೆ ತಿದ್ದುಪಡಿ ಮಾಡಲಾಗುವುದು. ಇದನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗುವುದು. ಕರಡು ಪ್ರಕಟಿಸಿದ 15 ದಿನಗಳಲ್ಲಿ ಅದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳು ಆಕ್ಷೇಪಣೆ ಸಲ್ಲಿಸಬಹುದು.

ADVERTISEMENT

ಪ್ರಕಟಗೊಂಡ 15 ದಿನಗಳಲ್ಲಿ ಒಳಗಾಗಿ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ, ಸಲಹೆ ಸ್ವೀಕೃತ ಆಗದೇ ಇದ್ದರೆ ಅಥವಾ ಸ್ವೀಕೃತವಾದ ಆಕ್ಷೇಪಣೆ, ಸಲಹೆಗಳು ಗುರುತರವಾಗಿರದೇ ಇದ್ದರೂ ಪುನಃ ಸಚಿವ ಸಂಪುಟದ ಅನುಮೋದನೆಗೆ ಮಂಡಿಸದೇ ಕರಡು ನಿಯಮಗಳನ್ನು ಅಂತಿಮವಾಗಿ ಹೊರಡಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಪಾಟೀಲ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.