ADVERTISEMENT

ಅನುಮತಿ ಪಡೆಯದೆ ಮೀಸಲು ಅರಣ್ಯ ಕೈಬಿಡಲು ಸಾಧ್ಯವಿಲ್ಲ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 19:30 IST
Last Updated 4 ಮಾರ್ಚ್ 2021, 19:30 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ಯಾವುದೇ ಅರಣ್ಯ ಭೂಮಿಯನ್ನು ರಾಜ್ಯ ಸರ್ಕಾರ ಮೀಸಲು ಅರಣ್ಯದಿಂದ ಕೈಬಿಡುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮಲೆನಾಡು ಪ್ರದೇಶದಲ್ಲಿ ಪುನರ್ವಸತಿ ಉದ್ದೇಶಕ್ಕೆ ಅರಣ್ಯ ಭೂಮಿಯ ಒಂದು ಭಾಗವನ್ನು 2017ರಲ್ಲಿ ಮೀಸಲು ಅರಣ್ಯದಿಂದ ಕೈಬಿಟ್ಟು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ರದ್ದುಪಡಿಸಿತು.

ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 28ರ ಅಡಿಯಲ್ಲಿ ರಾಜ್ಯ ಸರ್ಕಾರ ಅಧಿಕಾರ ಚಲಾಯಿಸಲು ಅವಕಾಶ ಇಲ್ಲ ಎಂದು ಪೀಠ ಹೇಳಿದೆ.

ADVERTISEMENT

ರಾಜ್ಯ ಅರಣ್ಯ ಕಾಯ್ದೆಯ ಸೆಕ್ಷನ್ 28ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಗಿರೀಶ್‌ ಆಚಾರ್ ಎಂಬುವರು ಅರ್ಜಿ ಸಲ್ಲಿಸಿ, ಇದು ಕೇಂದ್ರ ಕಾಯ್ದೆಯ ಸೆಕ್ಷನ್‌ 2ಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದರು.

‘ರಾಜ್ಯ ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರ ಸುಪ್ರೀಂ ಕೋರ್ಟ್‌ನ ಆದೇಶಕ್ಕೂ ವಿರುದ್ಧವಾಗಿದೆ. ಆದ್ದರಿಂದ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯದೆ ಮಾಡುವ ಆದೇಶವು ಮಾನ್ಯ ಆಗುವುದಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.