ADVERTISEMENT

ವಿಭಾಗೀಯ ಪೀಠಕ್ಕೆ ಸುಧೀಂದ್ರ ರಾವ್ ಮೇಲ್ಮನವಿ

ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ವಿಚಾರ

​ಪ್ರಜಾವಾಣಿ ವಾರ್ತೆ
Published 27 ಜುಲೈ 2020, 19:31 IST
Last Updated 27 ಜುಲೈ 2020, 19:31 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು:ಕರ್ನಾಟಕರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಹುದ್ದೆಯಿಂದ ಬಿಡುಗಡೆಗೊಳಿಸಿದ ಸರ್ಕಾರದ ಕ್ರಮ ಎತ್ತಿ ಹಿಡಿದಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಾ.ಎಂ.ಸುಧೀಂದ್ರರಾವ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ಡಾ.ಎಂ. ಸುಧೀಂದ್ರರಾವ್ ಅವರನ್ನು 2019ರ ಡಿ.30ರಂದು ಸರ್ಕಾರ ನೇಮಕ ಮಾಡಿತ್ತು. 2020ರ ಮೇ 2ರಂದು ಸುಧೀಂದ್ರರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ರಾಜೀನಾಮೆ ಪತ್ರ ಅಂಗೀಕರಿಸಿದ್ದ ಸರ್ಕಾರ, ಸುಧೀಂದ್ರರಾವ್ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಿತ್ತು.

ADVERTISEMENT

‘ಜಲ ಕಾಯ್ದೆ ಪ್ರಕಾರ ರಾಜೀನಾಮೆ ಪತ್ರವನ್ನು ಇಲಾಖೆಯ ಕಾರ್ಯದರ್ಶಿಗೆ ಸಲ್ಲಿಸಬೇಕೇ ಹೊರತು ಮುಖ್ಯಮಂತ್ರಿಗೆ ಅಲ್ಲ. ಹೀಗಾಗಿ ಅವರ ರಾಜೀನಾಮೆ ಅಂಗೀಕರಿಸಲು ಆಗುವುದಿಲ್ಲ’ ಎಂಬುದು ಸುಧೀಂದ್ರ ರಾವ್ ಅವರ ಪರ ವಕೀಲರ ವಾದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.