ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ನಿವೃತ್ತ ಮಹಾನಿರ್ದೇಶಕ (ಡಿಜಿ-ಐಜಿಪಿ) ಎಸ್.ಸಿ. ಸಕ್ಸೇನಾ ಅವರು ಬುಧವಾರ ನಿಧನರಾದರು.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
‘ಹೆಬ್ಬಾಳ ಬಳಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಆಪ್ತರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.