ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿ-ಐಜಿಪಿ) ನಿವೃತ್ತರಾಗಿದ್ದ ಎಸ್.ಸಿ. ಸಕ್ಸೇನಾ (69) ಅವರು ಬುಧವಾರ ನಿಧನರಾದರು.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ನಿವೃತ್ತ ಐಎಎಸ್ ಅಧಿಕಾರಿಯೂ ಆಗಿರುವ ಪತ್ನಿ ಮೀರಾ ಸಕ್ಸೇನಾ ಹಾಗೂ ಪುತ್ರ ಇದ್ದಾರೆ.
ಹೆಬ್ಬಾಳ ಬಳಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಕುಟುಂಬದವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.