ADVERTISEMENT

ಬೆಂಗಳೂರು: ನಿವೃತ್ತ ನೌಕರರ ಮಾಸಿಕ ಸಭೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 15:40 IST
Last Updated 4 ಜನವರಿ 2026, 15:40 IST
   

ಬೆಂಗಳೂರು: ಇಪಿಎಸ್‌–95, ಬಿಎಂಟಿಸಿ, ಕೆಎಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ 96ನೇ ಮಾಸಿಕ ಸಭೆ ಲಾಲ್‌ಬಾಗ್‌ ಆವರಣದಲ್ಲಿ ಭಾನುವಾರ ನಡೆಯಿತು.

ಇಪಿಎಸ್ ಪಿಂಚಣಿದಾರರ ಮೂಲ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ದಶಕದಿಂದ ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಕನಿಷ್ಠ ₹7,500 ಪಿಂಚಣಿ ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ಘೋಷಿಸಲಾಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ ಎಂದು ನೌಕರರು ಬೇಸರ ವ್ಯಕ್ತಪಡಿಸಿದರು.

ಕನಿಷ್ಠ ಪಿಂಚಣಿ ಹಾಗೂ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಹೋರಾಟ ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ADVERTISEMENT

ಸಂಘದ ಪದಾಧಿಕಾರಿಗಳಾದ ನಂಜುಂಡೇಗೌಡ, ಬ್ರಹ್ಮಚಾರಿ, ಮನೋಹರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.