ADVERTISEMENT

ನಿವೃತ್ತ ಐಜಿಪಿ ಎಂ.ವಿ.ಮೂರ್ತಿ ನಿಧನ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 20:06 IST
Last Updated 19 ಜೂನ್ 2025, 20:06 IST
ಮೂರ್ತಿ
ಮೂರ್ತಿ   

ಬೆಂಗಳೂರು: ನಗರದ ಎಚ್‌ಎಸ್‌ಆರ್‌ ಲೇಔಟ್‌ನ ನಿವಾಸಿ, ನಿವೃತ್ತ ಐಜಿಪಿ ಎಂ.ವಿ.ಮೂರ್ತಿ (76) ಅವರು ಅನಾರೋಗ್ಯದಿಂದಾಗಿ ಗುರುವಾರ ನಿಧನರಾದರು.

ಮೃತರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ. ಎಚ್‌ಎಸ್‌ಆರ್‌ ಲೇಔಟ್‌ನಲ್ಲಿನ ಅವರ ನಿವಾಸದಲ್ಲಿ ಶುಕ್ರವಾರ ಮಧ್ಯಾಹ್ನ 12ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸ್ವಂತ ಊರು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.