ADVERTISEMENT

ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಅಧಿಕಾರಿ K.R.ಕೃಷ್ಣಮೂರ್ತಿ ನಿಧನ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 20:24 IST
Last Updated 27 ಫೆಬ್ರುವರಿ 2026, 20:24 IST
   

ಬೆಂಗಳೂರು: ಡಾ. ಬಿ.ಆರ್‌. ಅಂಬೇಡ್ಕರ್ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಬಸವೇಶ್ವರನಗರ ನಿವಾಸಿ ಕೆ.ಆರ್. ಕೃಷ್ಣಮೂರ್ತಿ (73) ಗುರುವಾರ ಹೃದಯಾಘಾತದಿಂದ ನಿಧನರಾದರು.

ಅವರು ಕಾಶ್ಮೀರ ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹೃದಯಾಘಾತ ಆಗಿತ್ತು. ಮೃತರಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ. ಮಾಗಡಿ ತಾಲ್ಲೂಕಿನ ಕಲ್ಯಾ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT