ADVERTISEMENT

ರೇವಾ ವಿಶ್ವವಿದ್ಯಾಲಯ: ಸಂಶೋಧನಾ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 25 ಮೇ 2019, 19:23 IST
Last Updated 25 ಮೇ 2019, 19:23 IST
ರೇವಾ ವಿಶ್ವವಿದ್ಯಾಲಯದಲ್ಲಿ ನಡೆದ ಎರಡು ದಿನಗಳ ಸಂಶೋಧನಾ ಸಮ್ಮೇಳನವನ್ನು ಅಮೆರಿಕದ ಅಲಬಾಮ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್‌ ವಿಭಾಗದ ಮುಖ್ಯಸ್ಥ ಪ್ರೊ. ಹೆಗ್ಗೆರೆ ರಂಗನಾಥ್ ಉದ್ಘಾಟಿಸಿದರು. ಇಂದೋರ್‌ನ ಐಐಎಂ ಮಾರ್ಕೆಟಿಂಗ್‌ ಪ್ರಾಧ್ಯಾಪಕ ಡಾ.ರಾಜೇಂದ್ರ ನರಗುಂದಕರ್‌, ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಪಿ. ಶ್ಯಾಮರಾಜು, ಕುಲಪತಿ ಡಾ.ಎಸ್‌.ವೈ.ಕುಲಕರ್ಣಿ ಇದ್ದರು.

ಬೆಂಗಳೂರು: ರೇವಾ ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಸಂಶೋಧನಾ ಸಮ್ಮೇಳನ ವೈಜ್ಞಾನಿಕ ಆವಿಷ್ಕಾರಗಳ ಕುರಿತ ಇತ್ತೀಚಿನ ಬೆಳವಣಿಗೆಗಳಕುರಿತ ಜ್ಞಾನ ವಿನಿಮಯಕ್ಕೆ ವೇದಿಕೆ ಕಲ್ಪಿಸಿತು.

ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ತೊಡಗಿರುವ ಜಗತ್ತಿನ ಪ್ರಮುಖ ಸಂಸ್ಥೆಗಳ ಸಂಪನ್ಮೂಲ ವ್ಯಕ್ತಿಗಳು ಹಾಗೂ ಹೆಸರಾಂತ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಈ ಕ್ಷೇತ್ರದ ಇತ್ತೀಚಿನ ಒಲವುಗಳ ಕುರಿತು ಮಾಹಿತಿ ಹಂಚಿಕೊಂಡರು. ವಿಶ್ವವಿದ್ಯಾನಿಲಯದ ಸಂಶೋಧಕರ ಸಾಧನೆಗಳನ್ನು ಸಮ್ಮೇಳನದಲ್ಲಿ ಪ್ರದರ್ಶಿಸಲಾಯಿತು.

ಅಮೆರಿಕದ ಅಲಬಾಮ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್‌ ವಿಭಾಗದ ಮುಖ್ಯಸ್ಥ ಪ್ರೊ. ಹೆಗ್ಗೆರೆ ರಂಗನಾಥ್ ಮತ್ತು ಇಂದೋರ್‌ನ ಐಐಎಂ ಮಾರ್ಕೆಟಿಂಗ್‌ ಪ್ರಾಧ್ಯಾಪಕ ಡಾ. ರಾಜೇಂದ್ರ ನರಗುಂದಕರ್‌ ಅವರು ಸಮ್ಮೇಳನವನ್ನು ಗುರುವಾರ ಉದ್ಘಾಟಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.