ADVERTISEMENT

ರೇವಾ ವಿವಿ; ಮತದಾನ ಜಾಗೃತಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2018, 18:45 IST
Last Updated 9 ಡಿಸೆಂಬರ್ 2018, 18:45 IST
ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಅವರು, ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ಪ್ರಶಂಸಾ ಪತ್ರ ವಿತರಿಸಿದರು
ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಅವರು, ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ಪ್ರಶಂಸಾ ಪತ್ರ ವಿತರಿಸಿದರು   

ಬೆಂಗಳೂರು: ಯಲಹಂಕದ ರೇವಾ ವಿಶ್ವವಿದ್ಯಾಲಯದ ಮತದಾನ ಸಾಕ್ಷರತಾ ಸಂಘಟನೆಯು ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನದ ಮೊದಲ ಹಂತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ನಡೆಯಿತು.

ಜಾಗೃತಿಗೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರವನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗಿತ್ತು. ಇಲ್ಲಿ ಶೇ 85ರಷ್ಟು ಮತದಾನವಾಗುತ್ತಿದ್ದು, ಈ ಅಭಿಯಾನದಿಂದ ಶೇ 100ರಷ್ಟು ಮತದಾನ ಆಗುವಂತೆ ಮಾಡುವ ಗುರಿಯಿಂದ 11 ದಿನಗಳ ಕಾಲ 800 ವಿದ್ಯಾರ್ಥಿಗಳು ಮತ್ತು 200 ಸಿಬ್ಬಂದಿ, ಮನೆಮನೆಗೆ ತೆರಳಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನೆರವಾಗಿದ್ದರು. ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದ್ದರು.

ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್, ‘ಉತ್ತಮ ಸಮಾಜ ನಿರ್ಮಾಣ ಆಗಬೇಕಾದರೆ ಪ್ರಜಾಪ್ರಭುತ್ವ ವ್ಯವಸ್ಥೆ ಉತ್ತಮವಾಗಿರಬೇಕು. ಎಲ್ಲರೂ ಮತದಾನ ಮಾಡಿದರೆ ಒಳ್ಳೆಯ ಅಭ್ಯರ್ಥಿಆಯ್ಕೆ ಮಾಡಬಹುದು ಎಂದರು.

ADVERTISEMENT

ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು, ‘ಇದು ಅಭಿಯಾನದ ಮೊದಲ ಹಂತವಾಗಿದ್ದು, ಅದರ ಭಾಗವಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮನೆಮನೆಗೆ ತೆರಳಿ ಗೂಗಲ್ ಸಹಾಯದಿಂದ ಪ್ರಶ್ನೆಗಳನ್ನು ರೂಪಿಸಿ, 1 ಲಕ್ಷ ನಿವಾಸಿಗಳ ಭೇಟಿ ಮಾಡಿ ವರದಿ ಸಿದ್ದಪಡಿಸಿದ್ದಾರೆ. ಇದನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಶೀಘ್ರದಲ್ಲೇ 2ನೇ ಹಂತದ ಜಾಗೃತಿ ಅಭಿಯಾನ ಆರಂಭವಾಗಲಿದೆ’ ಎಂದರು. ರೇವಾ ವಿವಿ ಕುಲಪತಿ ಡಾ.ಎಸ್.ವೈ.ಕುಲಕರ್ಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.