ADVERTISEMENT

ಶಿಕ್ಷಣ, ಆರೋಗ್ಯ ಉಳ್ಳವರ ಪಾಲು: ಹಿ.ಚಿ. ಬೋರಲಿಂಗಯ್ಯ ಬೇಸರ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2024, 15:39 IST
Last Updated 8 ಸೆಪ್ಟೆಂಬರ್ 2024, 15:39 IST
<div class="paragraphs"><p>ಚಂದ್ರಶೇಖರ ಹಡಪದ ಅವರಿಗೆ ‘ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿ ಬಾ ಫುಲೆ’ ಪ್ರಶಸ್ತಿಯನ್ನು ಕವಯಿತ್ರಿ ಕೆ. ಷರೀಫಾ ಪ್ರದಾನ ಮಾಡಿದರು. </p></div>

ಚಂದ್ರಶೇಖರ ಹಡಪದ ಅವರಿಗೆ ‘ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿ ಬಾ ಫುಲೆ’ ಪ್ರಶಸ್ತಿಯನ್ನು ಕವಯಿತ್ರಿ ಕೆ. ಷರೀಫಾ ಪ್ರದಾನ ಮಾಡಿದರು.

   

ಬೆಂಗಳೂರು: ‘ಎಲ್ಲರಿಗೂ ಸಮಾನವಾಗಿ ಮತ್ತು ಉಚಿತವಾಗಿ ದೊರೆಯಬೇಕಿದ್ದ ಶಿಕ್ಷಣ, ವೈದ್ಯಕೀಯ ಕ್ಷೇತ್ರಗಳು ಉದ್ಯಮವಾಗಿ ಬದಲಾಗಿ ಉಳ್ಳವರ ಪಾಲಾಗಿದೆ’ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಹಿ.ಚಿ. ಬೋರಲಿಂಗಯ್ಯ ಬೇಸರ ವ್ಯಕ್ತಪಡಿಸಿದರು.

ಕನ್ನಡ ಸಂಘರ್ಷ ಸಮಿತಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿ ಬಾ ಫುಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ADVERTISEMENT

ಸರ್ಕಾರಿ ಶಾಲೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಬಡವರಿಗೆ ಸರಿಯಾದ ಶಿಕ್ಷಣ ದೊರೆಯುತ್ತಿಲ್ಲ. ಬಡ ಪೋಷಕರೂ ಅನಿವಾರ್ಯವಾಗಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ ಎಂದು ವಿಷಾದಿಸಿದರು.

ಪ್ರಶಸ್ತಿ ಪ್ರದಾನ ಮಾಡಿದ ಕವಯಿತ್ರಿ ಕೆ. ಷರೀಫಾ ಮಾತನಾಡಿ, ‘ಶೋಷಿತರಿಗೆ ಶಿಕ್ಷಣ ದೊರಕಿಸಿಕೊಡಲು ಸಾವಿತ್ರಿಬಾಯಿ ಫುಲೆ ಶ್ರಮಿಸಿದ್ದರು. ಅವರನ್ನು ನೆನಪಿಸಿಕೊಳ್ಳಬೇಕು. ಅವರಿಗೆ ಬೆಂಗಾವಲಾಗಿ ನಿಂತ ಫಾತಿಮಾ ಶೇಖ್‌ ಅವರನ್ನೂ ನೆನಪಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಕವಿ ಚಂದ್ರಶೇಖರ ಹಡಪದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಎ.ಎಸ್.‌ನಾಗರಾಜಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಚಂದ್ರಶೇಖರ ಹಡಪದ ಅವರಿಗೆ ‘ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿ ಬಾ ಫುಲೆ’ ಪ್ರಶಸ್ತಿಯನ್ನು ಕವಯಿತ್ರಿ ಕೆ. ಷರೀಫಾ ಪ್ರದಾನ ಮಾಡಿದರು. ಕನ್ನಡ ಸಂಘರ್ಷ ಸಮಿತಿ ಪ್ರಧಾನ ಕಾರ್ಯದರ್ಶಿ ತಾ.ಸಿ. ತಿಮ್ಮಯ್ಯ, ಕಾರ್ಯಾಧ್ಯಕ್ಷ ಎಂ. ಪ್ರಕಾಶಮೂರ್ತಿ, ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಹಿ.ಚಿ. ಬೋರಲಿಂಗಯ್ಯ, ಕನ್ನಡ ಹೋರಾಟಗಾರ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಹಾಗೂ ಅಧ್ಯಕ್ಷ ಎ.ಎಸ್. ನಾಗರಾಜಸ್ವಾಮಿ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.