ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಇ-ಸ್ಕೂಟರ್ ಚಾಲನೆ ವೇಳೆ ಮೊಬೈಲ್‌ನಲ್ಲಿ ಐಪಿಎಲ್ ಪಂದ್ಯ ವೀಕ್ಷಣೆ ಮಾಡುತ್ತಿದ್ದ ಸವಾರನಿಗೆ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ.
ಪ್ರಶಾಂತ್ ಎಂಬುವವರಿಗೆ ₹1,500 ದಂಡ ವಿಧಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಏ.2ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಆರ್‌ಸಿಬಿ ತಂಡಗಳ ಮಧ್ಯೆ ಐಪಿಎಲ್ ಪಂದ್ಯವಿತ್ತು.
ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ ಪ್ರಶಾಂತ್ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಚಾಲನೆ ಮಾಡುತ್ತಾ ಕ್ರಿಕೆಟ್ ಪಂದ್ಯ ವೀಕ್ಷಣೆ ಮಾಡುತ್ತಿದ್ದರು. ಅದನ್ನು ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ವಿಡಿಯೊ ಮಾಡಿ, ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದರು. ಅದನ್ನು ಸಂಚಾರ ಪೊಲೀಸರ ಖಾತೆಗೆ ಟ್ಯಾಗ್ ಮಾಡಿ ಸವಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.
ಘಟನಾ ಸ್ಥಳದ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಪ್ರಶಾಂತ್ ಅವರನ್ನು ಪತ್ತೆಹಚ್ಚಿ, ಠಾಣೆಗೆ ಕರೆಸಿ ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.