ಸಾಂದರ್ಭಿಕ ಚಿತ್ರ
ಬೆಂಗಳೂರು: ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ.
ಸುಮಾರು 35ರಿಂದ 40 ವರ್ಷದ ವ್ಯಕ್ತಿಯ ಕೊಲೆಯಾಗಿದ್ದು ಹೆಸರು ಹಾಗೂ ವಿಳಾಸ ಗೊತ್ತಾಗಿಲ್ಲ. ಕೊಲೆಯಾದ ವ್ಯಕ್ತಿಯ ಪೂರ್ವಪರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಚಿಂದಿ ಆಯುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಂಗಳವಾರ ಸ್ವಾತಂತ್ರ್ಯ ಉದ್ಯಾನದ ಹಿಂಭಾಗದ ಬಿಬಿಎಂಪಿ ಕಸದ ಡಂಪ್ ಮಾಡುವ ಜಾಗದಲ್ಲಿ ವ್ಯಕ್ತಿಯೊಬ್ಬರ ಜತೆಗೆ ಜಗಳ ನಡೆದಿದೆ. ಅದು ವಿಕೋಪಕ್ಕೆ ಹೋದಾಗ, ಈತನನ್ನು ತಳ್ಳಲಾಗಿದೆ. ಕಲ್ಲಿನ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.