ADVERTISEMENT

ಖಾಸಗಿ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ ನಿರ್ಧಾರ

ವಿಶೇಷ ಪ್ಯಾಕೇಜ್‌ ಘೋಷಣೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2020, 7:37 IST
Last Updated 25 ಅಕ್ಟೋಬರ್ 2020, 7:37 IST

ಬೆಂಗಳೂರು: ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ನೆರವಿಗಾಗಿ ತಕ್ಷಣ ವಿಶೇಷ ಪ್ಯಾಕೇಜ್‌ ಘೋಷಿಸಬೇಕು. ಶಿಕ್ಷಕ, ಶಿಕ್ಷಕೇತರ ಕುಟುಂಬಗಳಿಗೆ ಸರ್ಕಾರ ನೆರವು ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್‌ ಎರಡನೇ ವಾರದಲ್ಲಿ ‘ಬೆಂಗಳೂರು ಚಲೋ’ ನಡೆಸಲು ‘ಕರ್ನಾಟಕ ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕೆಎಎಂಎಸ್‌) ನಿರ್ಧರಿಸಿದೆ.

‘ಶಿಕ್ಷಕರಿದ್ದರೆ ಶಿಕ್ಷಣ ಸಂಸ್ಥೆಗಳು ಉಳಿಯುತ್ತವೆ. ಶಿಕ್ಷಣ ಸಂಸ್ಥೆಗಳು ಉಳಿದರೆ ಶಿಕ್ಷಣದ ಉಳಿಯುತ್ತವೆ. ಇದನ್ನು ಅರಿತು ಈ ಹೋರಾಟಕ್ಕೆ ಮುಂದಾಗಿದ್ದೇವೆ. ಕೆಎಎಂಎಸ್ ಸಂಘಟನೆಯ ನಡೆ ಶಿಕ್ಷಕರ ಕಡೆ’ ಶೀರ್ಷಿಕೆಯಡಿ ತುಮಕೂರಿನಿಂದ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು’ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ತಿಳಿಸಿದ್ದಾರೆ.

‘ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ಅಲ್ಪ ಪ್ರಮಾಣದಲ್ಲಿ ಆರ್‌ಟಿಇ ಹಣ ಬಿಡುಗಡೆ ಮಾಡಲಾಗಿದೆ. ಸಂಸ್ಥೆಗಳು ಏಳೆಂಟು ತಿಂಗಳುಗಳಿಂದ ಶಿಕ್ಷಕರಿಗೆ ಕನಿಷ್ಠ ಸಂಬಳ ನೀಡುತ್ತಾ, ಎಲ್ಲ ಖರ್ಚು–ವೆಚ್ಚವನ್ನು ಅನಿವಾರ್ಯವಾಗಿ ಭರಿಸುತ್ತಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದಿಂದಾಗಲಿ, ಪೋಷಕರಿಂದಾಗಲಿ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ’ ಎಂದು ಅವರು ದೂರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.