ಜೈಲು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಗೂಡ್ಸ್ ವಾಹನ ಡಿಕ್ಕಿಯಿಂದ ಟಿಟಿ ವಾಹನ ಚಾಲಕ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಡ್ಸ್ ವಾಹನ ಚಾಲಕನಿಗೆ ನಗರದ ಎಸಿಜೆಎಂ ನ್ಯಾಯಾಲಯ 1 ವರ್ಷ 3 ತಿಂಗಳು ಜೈಲು ಶಿಕ್ಷೆ ಹಾಗೂ ₹9 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
2023ರಲ್ಲಿ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಆರ್. ಎಂಟರ್‌ಪ್ರೈಸಸ್ ಬಳಿ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಟಿಟಿ ವಾಹನ ಚಾಲಕ ಪಂಚಾಕ್ಷರಿ (27) ಮೃತಪಟ್ಟಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ, ಗೂಡ್ಸ್ ವಾಹನ ಚಾಲಕ ಎಂ.ಕುಮಾರ್‌ಗೆ ಶಿಕ್ಷೆ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ 3 ತಿಂಗಳು 10 ದಿನ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ ಎಂದು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.