ಹೊಸಕೋಟೆ: ಬೆಂಗಳೂರು- ಚೆನ್ನೈ ರಾಷ್ಟ್ರೀಯ ಹೆದ್ದಾರಿ ಗೊಟ್ಟಿಪುರ ಗೇಟ್ ಬಳಿ ಆಂಧ್ರಪ್ರದೇಶದ ಸರ್ಕಾರಿ ಸಾರಿಗೆ ಬಸ್ ಮತ್ತು ಲಾರಿ ನಡುವೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಒಂದೂವರೆ ತಿಂಗಳ ಮಗು ಸೇರಿ ಐವರು ಮೃತಪಟ್ಟಿದ್ದಾರೆ.
ಬಸ್‌ನಲ್ಲಿದ್ದ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ ಮೂರು ತಿಂಗಳ ಮಗು ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ, ಶಾರದಾ(45) ಎಂಬುವವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತಪಟ್ಟ ಎಲ್ಲರೂ ಆಂಧ್ರಪ್ರದೇಶ ದವರು. ಕೇಶವರೆಡ್ಡಿ ಎಂಬುವವರು ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. 16 ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆ ಸಿಲಿಕಾನ್ ಸಿಟಿ ಹಾಗೂ ಎಂವಿಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್, ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.