ADVERTISEMENT

‘ರಸ್ತೆ ಅಪಘಾತಕ್ಕೆ 10 ಸಾವಿರ ಬಲಿ’

ಸಾರ್ವಜನಿಕ ಸಾರಿಗೆ ಬಳಕೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 20:31 IST
Last Updated 14 ಜನವರಿ 2020, 20:31 IST
ಬಿ.ಎಸ್.ಯಡಿಯೂರಪ್ಪ ಅವರು ಸಂಚಾರ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಿಸಿದರು. ಡಿಜಿಪಿ ನೀಲಮಣಿ ಎನ್.ರಾಜು, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಚಾರ ಜಂಟಿ ಪೊಲೀಸ್ ಕಮಿಷನರ್ ಬಿ.ಆರ್.ರವಿಕಾಂತೇಗೌಡ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ ರಾವ್ ಇದ್ದರು – ಪ್ರಜಾವಾಣಿ ಚಿತ್ರ
ಬಿ.ಎಸ್.ಯಡಿಯೂರಪ್ಪ ಅವರು ಸಂಚಾರ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಿಸಿದರು. ಡಿಜಿಪಿ ನೀಲಮಣಿ ಎನ್.ರಾಜು, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಚಾರ ಜಂಟಿ ಪೊಲೀಸ್ ಕಮಿಷನರ್ ಬಿ.ಆರ್.ರವಿಕಾಂತೇಗೌಡ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ ರಾವ್ ಇದ್ದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ರಸ್ತೆ ಅಪಘಾತದಲ್ಲಿ ಕಳೆದ ವರ್ಷ ರಾಜ್ಯದಲ್ಲಿ 10,317 ಮಂದಿ ಸತ್ತಿದ್ದಾರೆ. ಮರಣ ಹೊಂದಿದವರಲ್ಲಿ ಶೇ 50ರಷ್ಟು ಮಂದಿ 25ರಿಂದ 65 ವರ್ಷದೊಳಗಿನವರು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಬೆಂಗಳೂರು ಸಂಚಾರ ಪೊಲೀಸ್ ಮತ್ತು ಸಾರಿಗೆ ಇಲಾಖೆ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ‘31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ’ ಉದ್ಘಾಟಿಸಿ, ರಸ್ತೆ ಸುರಕ್ಷತೆ ಕೈಪಿಡಿ ‘ಮೊಳಕೆಯಲ್ಲೇ ತಿದ್ದಿರಿ’ ಹಾಗೂ ‘ಬೆಂಗಳೂರು ಸಂಚಾರ ಪೊಲೀಸರ ಸಾಧನೆಗಳ ಕೈಪಿಡಿ’ಬಿಡುಗಡೆ ಮಾಡಿದರು.

‘2019ರಲ್ಲಿ ರಸ್ತೆ ಅಪಘಾತದಲ್ಲಿ 49,571 ಜನರು ಗಾಯಗೊಂಡಿದ್ದಾರೆ. ಇದರಲ್ಲಿ ಬೆಂಗಳೂರಿನವರೇ ಅಧಿಕ. ನಗರದ ಜನಸಂಖ್ಯೆ ಒಂದು ಕೋಟಿ ದಾಟಿದೆ. ಶೇ 50ರಷ್ಟು ಜನರು ಕನಿಷ್ಠ ಒಂದು ವಾಹನವನ್ನು ಹೊಂದಿದ್ದಾರೆ. ಸಂಚಾರ ನಿಯಮಗಳು ಮತ್ತು ಆಧುನಿಕ ತಂತ್ರಜ್ಞಾನದ ಉಪಕರಣಗಳಿಂದ ಸಂಚಾರ ಸಮಸ್ಯೆ ನಿವಾರಿಸಲು ಸಾಧ್ಯವಿಲ್ಲ. ಸಂಚಾರ ನಿಯಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಹೆಚ್ಚಬೇಕು. ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಯಡಿಯೂರಪ್ಪ ಹೇಳಿದರು.

ADVERTISEMENT

ಒಂದು ವಾರ ಕಾಲ ನಗರದ ಆಯ್ದ ಶಾಲೆಗಳಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ನಮ್ಮ ಪೊಲೀಸರು ಸಂಚಾರ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡುತ್ತಿದ್ದಾರೆ
-ಬಸವರಾಜ ಬೊಮ್ಮಾಯಿ,ಗೃಹ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.