
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ದಾಬಸ್ ಪೇಟೆ: ಮಧುಗಿರಿ ರಸ್ತೆಯ ನರಸೀಪುರ ತೋಪಿನ ಬಳಿ ಸಾರಿಗೆ ಸಂಸ್ಥೆ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಯುವಕ ಮೃತಪಟ್ಟಿದ್ದಾರೆ.
ದೀಕ್ಷಿತ್ ಶೆಟ್ಟಿ (21) ಮೃತ ಯುವಕ. ಬೈಂದೂರಿನ ದೀಕ್ಷಿತ್, ಮತ್ತಿಕೆರೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಸಿ.ಎ ವ್ಯಾಸಂಗ ಮಾಡುತ್ತಿದ್ದರು.
ಸ್ನೇಹಿತರೊಂದಿಗೆ ದೇವರಾಯನ ದುರ್ಗ ಬೆಟ್ಟಕ್ಕೆ ಬೈಕ್‌ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಮೃತದೇಹ ನೀಡಲಾಯಿತು. ದಾಬಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಚಾಲಕನನ್ನು ಬಂಧಿಸಿ, ಬಸ್ ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.