ADVERTISEMENT

ಯಲಹಂಕ: ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 16:26 IST
Last Updated 16 ಆಗಸ್ಟ್ 2024, 16:26 IST
ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು.
ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು.   

ಯಲಹಂಕ: ಬ್ಯಾಟರಾಯನಪುರ ವಾರ್ಡ್‌ ಸಂಖ್ಯೆ 10ರ ವ್ಯಾಪ್ತಿಯಲ್ಲಿ ₹2.50 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು.

ಕುಂಟೆ ಮುನಿಶಾಮಪ್ಪ ರಸ್ತೆಯಿಂದ ಗರಡಿಮನೆ ಕ್ರಾಸ್‌ ಮೂಲಕ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಹಾಗೂ ಅಂಬೇಡ್ಕರ್‌ ರಸ್ತೆ ಮತ್ತು ಶಬರಿನಗರ ಬಡಾವಣೆಯ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಸಚಿವರು ಗುದ್ದಲಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಈ ಹಿಂದೆ ಈ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿತ್ತು. ಹಳೆಯದಾಗಿದ್ದ ರಸ್ತೆಗಳನ್ನು ಈಗ ಪುನರ್‌ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಕೆಪಿಸಿಸಿ ಸದಸ್ಯ ಶುಕೂರ್‌ ಅಹಮದ್‌ ಖಾನ್‌, ಕಾಂಗ್ರೆಸ್‌ ಮುಖಂಡರಾದ ಎನ್‌.ಆದಿರಾಮು, ಕೆ.ಮಂಜುನಾಥ್‌, ಬಿ.ಕೆ.ಗೋಪಾಲಕೃಷ್ಣ, ಬಸವರಾಜು, ಎ.ರಾಮಯ್ಯ, ರಾಮಚಂದ್ರ, ಸುಮಿತ್ರಮ್ಮ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.