ಕೃಷ್ಣ ಬೈರೇಗೌಡ
ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಕೊಡಿಗೇಹಳ್ಳಿಯ ಸೊಣ್ಣೇಗೌಡ ಬಡಾವಣೆ ಹಾಗೂ ಹೊಸಟ್ಟಿ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ‘ಈ ಬಡಾವಣೆಗಳಲ್ಲಿ ಹಿಂದೆ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿತ್ತು. ಆದರೆ, ಒಳಚರಂಡಿ ಮತ್ತು ಕಾವೇರಿ ನೀರು ಕೊಳವೆ ಮಾರ್ಗದ ಅಳವಡಿಕೆ ಕಾಮಗಾರಿ ಕೈಗೊಂಡಿದ್ದರಿಂದ ರಸ್ತೆಗಳು ಹಾಳಾಗಿ, ಸಂಚಾರಕ್ಕೆ ತೊಂದರೆಯಾಗಿತ್ತು. ಸ್ಥಳೀಯರ ಮನವಿಯ ಮೇರೆಗೆ ರಸ್ತೆಗಳ ಮರು ಅಭಿವೃದ್ಧಿ ಮತ್ತು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ವೆಂಕಟಸ್ವಾಮಿ, ಹನುಮಂತಿ, ಶಾಂತಮ್ಮ, ಮಹೇಶ್, ಲೋಕೇಶ್, ರವಿಶಂಕರ್‌ಗೌಡ, ಬಿಬಿಎಂಪಿ ಸಹಾಯಕ ಎಂಜಿನಿಯರ್ ಪ್ರದೀಪ್, ಗುತ್ತಿಗೆದಾರ ಆರ್. ಚಿದಾನಂದಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.