ಯಲಹಂಕದ ಕಾಮಾಕ್ಷಮ್ಮ ಮತ್ತು ಕೊಂಡಪ್ಪ ಬಡಾವಣೆಯಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಚಾಲನೆ ನೀಡಿದರು.
ಯಲಹಂಕ: ಕೆಂಪೇಗೌಡ ಮತ್ತು ಚೌಡೇಶ್ವರಿ ವಾರ್ಡ್ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ₹12 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಆರ್. ವಿಶ್ವನಾಥ್ ಚಾಲನೆ ನೀಡಿದರು.
ಇದೇ ವೇಳೆ ಮನೆಗಳಿಗೆ ಕಾವೇರಿ ಕುಡಿಯುವ ನೀರು ಸರಬರಾಜಿಗೆ ಚಾಲನೆ ನೀಡಿ ಮಾತನಾಡಿದ ವಿಶ್ವನಾಥ್, ‘ವಿವಿಧ ಮೂಲಗಳಿಂದ ಅನುದಾನ ಮಂಜೂರು ಮಾಡಿಸಿಕೊಂಡು ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಕ್ರಮವಹಿಸಲಾಗಿದೆ. ಯಲಹಂಕದಲ್ಲಿ ಶೀಘ್ರದಲ್ಲೇ ಗುಂಡಿ ಮುಚ್ಚುವ ಕಾರ್ಯ ಆರಂಭಿಸಲಾಗುವುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.