
ಪ್ರಜಾವಾಣಿ ವಾರ್ತೆ
ಹೆಸರಘಟ್ಟ: ಮಾಕಳಿಯಿಂದ ಹುಸ್ಕೂರು ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಯೂನಿಬಿಕ್ ಕಾರ್ಖಾನೆ ಮುಂಭಾಗ ರಸ್ತೆಯು ಕಿತ್ತು ಹೋಗಿದ್ದು ದೊಡ್ಡ ಗುಂಡಿಯಾಗಿದೆ.
ಗುಂಡಿಯಲ್ಲಿ ಮಳೆ ನೀರು ನಿಂತು ವಾಹನಗಳು ಓಡಾಡುವುದೇ ದುಸ್ತರವಾಗಿದೆ. ಈ ರಸ್ತೆಯಲ್ಲಿ ಬಾರಿ ವಾಹನಗಳು ಸಂಚರಿಸುವುದರಿಂದ ಕೆಲವೊಮ್ಮೆ ಟ್ರಾಫಿಕ್ ಜಾಮ್ ಆಗುತ್ತಿದೆ.
ತಿರುವಿನಲ್ಲಿಯೇ ಆಳವಾದ ಗುಂಡಿ ಬಿದ್ದಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿ ಸ್ಥಳೀಯರು ಮತ್ತು ವಾಹನ ಸವಾರರು ಆಗ್ರಹಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.