ADVERTISEMENT

₹10 ಕೋಟಿ ವೆಚ್ಚದ ಡಾಂಬರೀಕರಣ ಕಾಮಗಾರಿ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2025, 18:47 IST
Last Updated 3 ನವೆಂಬರ್ 2025, 18:47 IST
ಬಿಇಎಲ್ 1ನೇ ಹಂತದಲ್ಲಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್, ಎಂ. ಗಂಗರಾಜು, ಲೋಕೇಶ್ ಮತ್ತಿತ್ತರಿದ್ದಾರೆ.
ಬಿಇಎಲ್ 1ನೇ ಹಂತದಲ್ಲಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್, ಎಂ. ಗಂಗರಾಜು, ಲೋಕೇಶ್ ಮತ್ತಿತ್ತರಿದ್ದಾರೆ.   

ರಾಜರಾಜೇಶ್ವರಿ ನಗರ: ಹೇರೋಹಳ್ಳಿ ವಾರ್ಡ್ ನ ಈಸ್ಟ್ ವೆಸ್ಟ್ ಕಾಲೇಜು ರಸ್ತೆ, ಬಿಳಿಕಲ್ಲು, ಬಿಇಎಲ್ 1 ಮತ್ತು 2ನೇ ಹಂತದಲ್ಲಿ ₹10 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಹೇರೋಹಳ್ಳಿ, ಬಿದರಕಲ್ಲು ವಾರ್ಡ್ ವ್ಯಾಪ್ತಿಯಲ್ಲಿ ಸುಸಜ್ಜಿತ ರಸ್ತೆ, ಡಾಂಬರೀಕರಣ, ಒಳಚರಂಡಿ ವ್ಯವಸ್ಥೆ ಇರಲಿಲ್ಲ. ಮಳೆ ಬಂದಾಗ ರಸ್ತೆಗಳು ಕೆಸರು ಗದ್ದೆ ಆಗುತ್ತಿದ್ದವು. ಈ ಭಾಗಕ್ಕೆ ಮೂಲ ಸೌಲಭ್ಯ ಕಲ್ಪಿಸುವುದೇ ದೊಡ್ಡ ಸವಾಲಾಗಿತ್ತು. ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಹೇಳಿದರು. 

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಎಂ. ಗಂಗರಾಜು, ಉದ್ಯಮಿ ಎಸ್.ಟಿ. ರಮೇಶ್, ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಂದ್ರಶೇಖರ್, ಗಿಡ್ಡದ ಕೋನೇನಹಳ್ಳಿ ಕೆಂಪಣ್ಣ, ಕಾಚೋಹಳ್ಳಿ ಲೋಕೇಶ್, ಮಹದೇವ್, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಮಾ, ಜಿಲ್ಲಾ ಕಾರ್ಯದರ್ಶಿ ನಾಗವೇಣಿ, ಸವಿತಾ, ಕರೆಕಲ್ಲು ಮಾರೇಗೌಡ, ಗುಂಡಣ್ಣ, ಹೇರೋಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಗೌಡ ಜಿಬಿಎ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಮೇಶ್ ಹಾಜರಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.