ADVERTISEMENT

ರಸ್ತೆಯೇ ಇಲ್ಲವಲ್ಲ: ಹೈಕೋರ್ಟ್ ಆಶ್ಚರ್ಯ

ನ್ಯಾಯಮೂರ್ತಿ ಅರವಿಂದ ಕುಮಾರ್‌ ಬೇಸರ

​ಪ್ರಜಾವಾಣಿ ವಾರ್ತೆ
Published 17 ಜನವರಿ 2019, 19:29 IST
Last Updated 17 ಜನವರಿ 2019, 19:29 IST
.
.   

ಬೆಂಗಳೂರು: ಹೆಬ್ಬಾಳದ ಮೇಲ್ಸೇತುವೆಯಿಂದ ಕಂಟೋನ್ಮೆಂಟ್‌ಗೆ ಸಾಗಿ ಬರುವ ಜಯಮಹಲ್-ನಂದಿದುರ್ಗ ರಸ್ತೆಯಲ್ಲಿ ಅಕ್ಷರಶಃ ರಸ್ತೆಯೇ ಇಲ್ಲ, ಸಾರ್ವಜನಿಕರು ಅಲ್ಲಿ ಹೇಗಾದರೂ ಸಂಚರಿಸುತ್ತಾರೊ...!

‘ರಸ್ತೆಯಲ್ಲಿನ ತೆರೆದ ಗುಂಡಿಗಳಿಂದ ಜನರು ಸಾವು ನೋವುಗಳಿಗೆ ಈಡಾಗುತ್ತಿದ್ದಾರೆ’ ಎಂದು ಆಕ್ಷೇಪಿಸಿ ಕೋರಮಂಗಲದ ವಿಜಯನ್‌ ಮೆನನ್‌ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರು ವ್ಯಕ್ತಪಡಿಸಿದ ಆಶ್ಚರ್ಯವಿದು.

ADVERTISEMENT

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಜಲಮಂಡಳಿ ಪರ ವಕೀಲರು, ‘ನ್ಯಾಯಪೀಠದ ಹಿಂದಿನ ಆದೇಶಗಳ ಅನುಸಾರ ಕೈಗೊಂಡಿರುವ ಕ್ರಮದ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಿದ್ದು, ಅಷ್ಟರಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.