ಬೆಂಗಳೂರು: ದರೋಡೆ ಪ್ರಕರಣದ ಆರೋಪಿಗೆ ಸಹಕಾರ ನೀಡಿದ್ದ ಆರೋಪದಡಿ ಶಿವಾಜಿನಗರ ಠಾಣೆ ಹೆಡ್ ಕಾನ್‌ಸ್ಟೆಬಲ್ ಸೈಯದ್ ಸಮೀವುಲ್ಲಾ ಅವರನ್ನು ಅಮಾನತು ಮಾಡಲಾಗಿದೆ.
‘ವೈಟ್‌ಫೀಲ್ಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿಗೆ ಸೈಯದ್ ಸಮೀವುಲ್ಲಾ ಸಹಕಾರ ನೀಡಿದ್ದ ಬಗ್ಗೆ ಅಲ್ಲಿಯ ಡಿಸಿಪಿ ಇತ್ತೀಚೆಗೆ ವರದಿ ನೀಡಿದ್ದರು. ಅದನ್ನು ಪರಿಶೀಲಿಸಿ ಸಮೀವುಲ್ಲಾ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಪೂರ್ವ ವಿಭಾಗದ ಡಿಸಿಪಿ ಎಸ್.ಡಿ. ಶರಣಪ್ಪ ಹೇಳಿದರು.
‘ದರೋಡೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಪಾತ್ರದ ಬಗ್ಗೆ ತಿಳಿಯಲು ತನಿಖೆ ಮುಂದುವರಿದಿದೆ’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.