robbery
ಬೆಂಗಳೂರು: ರಸ್ತೆ ಬದಿ ನಿಂತು ಆಹಾರ ಸೇವಿಸುತ್ತಿದ್ದ ಗೂಡ್ಸ್ ವಾಹನದ ಚಾಲಕನ ಮೇಲೆ ಹಲ್ಲೆ ನಡೆಸಿ, ₹15 ಸಾವಿರ ನಗದು ಹಾಗೂ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ
ಕೆಂಪೇಗೌಡ ನಗರ ನಿವಾಸಿ, ಟೆಂಪೊ ಚಾಲಕ ರಮೇಶ್ ಅವರು ರಾತ್ರಿ 11ರ ಸುಮಾರಿಗೆ ತಮ್ಮ ಗೂಡ್ಸ್ ಟೆಂಪೊವನ್ನು ಎನ್.ಆರ್.ರಸ್ತೆಯಲ್ಲಿ ನಿಲ್ಲಿಸಿ, ರಸ್ತೆಬದಿ ಸಮೋಸ ತಿನ್ನುತ್ತಿದ್ದರು. ಆಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಅವರನ್ನು ಬೆದರಿಸಿ, ಹಲ್ಲೆ ಮಾಡಿ ಹಣ ಹಾಗೂ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ
ಈ ಸಂಬಂಧ ಪೊಲೀಸರಿಗೆ ಅವರು ದೂರು ನೀಡಿದ್ದಾರೆ. ದರೋಡೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದು, ರಸ್ತೆಯಲ್ಲಿನ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.