ADVERTISEMENT

ಫ್ಲ್ಯಾಟ್‌ಗೆ ನುಗ್ಗಿ ಕಳ್ಳತನ: ಪೊಲೀಸರ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2022, 20:45 IST
Last Updated 24 ಜೂನ್ 2022, 20:45 IST

ಬೆಂಗಳೂರು: ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲ್ಯಾಟ್‌ಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಆರೋಪದಡಿ ಸೈರಾಜ್ ಎಂಬುವರನ್ನು ಸಂಪಿಗೆಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ತಮಿಳುನಾಡಿನ ಸೈರಾಜ್, ತನ್ನ ಸಹಚರರ ಜೊತೆ ನಗರಕ್ಕೆ ಆಗಾಗ ಬಂದು ಕಳ್ಳತನ ಮಾಡುತ್ತಿದ್ದ. ಈತನ ಬಗ್ಗೆ ಮಾಹಿತಿ ಸಂಗ್ರಹಿಸಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.