ADVERTISEMENT

ರಾಬರ್ಟ್ ಪೈರಸಿಗೆ ಯತ್ನ; ಯುವಕ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2021, 21:11 IST
Last Updated 13 ಮಾರ್ಚ್ 2021, 21:11 IST

ಬೆಂಗಳೂರು: ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿರುವ ಸಿದ್ದೇಶ್ವರ ಚಿತ್ರಮಂದಿರದಲ್ಲಿ ರಾಬರ್ಟ್ ಸಿನಿಮಾ ಪೈರಸಿ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಮಧು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಮೂರು ದಿನಗಳಿಂದ ನಿರಂತರವಾಗಿ ಚಿತ್ರಮಂದಿರಕ್ಕೆ ಬರುತ್ತಿದ್ದ ಮಧು ಅವರನ್ನು ನೋಡಿದ್ದ ಸಿಬ್ಬಂದಿ, ಮಾಲೀಕರಿಗೆ ವಿಷಯ ತಿಳಿಸಿದ್ದರು. ಸಿನಿಮಾವನ್ನು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡುವಾಗಲೇ ಮಧುವನ್ನು ಹಿಡಿದುಕೊಂಡಿದ್ದ ಸಿಬ್ಬಂದಿ, ಗಸ್ತು ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT