ಆಸ್ಪತ್ರೆ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ರೊಬೊಟಿಕ್ ತಂತ್ರಜ್ಞಾನ ಆಧಾರಿತ ಮಂಡಿ ಚಿಪ್ಪು ಬದಲಿ ಶಸ್ತ್ರಚಿಕಿತ್ಸೆ ಕಾರ್ಯಾಗಾರವು ಪಿಇಎಸ್ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್‌ನಲ್ಲಿರುವ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಕ್ರವಾರ ನಡೆಯಿತು.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ಕಾರ್ಯಾಗಾರ ಉದ್ಘಾಟಿಸಿದರು.
ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ.ಆರ್. ದೊರೆಸ್ವಾಮಿ ಮತ್ತು ಸಮ-ಕುಲಾಧಿಪತಿ ಜವಾಹರ್ ದೊರೆಸ್ವಾಮಿ ಮತ್ತು ಪಿಇಎಸ್ ವಿಶ್ವವಿದ್ಯಾಲಯದ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ನಿರ್ದೇಶಕ ಸುರೇಶ್ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನಡೆಯಿತು.
ಒಂದೇ ದಿನದಲ್ಲಿ 3 ವಿಭಿನ್ನ ರೊಬೋಟಿಕ್ ವ್ಯವಸ್ಥೆಗಳೊಂದಿಗೆ 4 ಮಂಡಿ ಚಿಪ್ಪು ಬದಲಿ ಶಸ್ತ್ರಚಿಕಿತ್ಸೆಗಳನ್ನು ನೇರ ಪ್ರಸಾರ ಮಾಡಲಾಯಿತು.
ಆರ್ಥೋಪೆಡಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಅವಿನಾಶ್ ಮಾತನಾಡಿ, ‘ರೊಬೊಟಿಕ್ಸ್ ಪರಿಕಲ್ಪನೆ ಭಾರತಕ್ಕೆ ಹೊಸದಲ್ಲ’ ಎಂದು ಪ್ರತಿಪಾದಿಸಿದರು.
‘ತಾಂತ್ರಿಕ ಕ್ರಾಂತಿಯ ಮಧ್ಯೆ ಯಂತ್ರ ಕಲಿಕೆ, ಆಳವಾದ ಕಲಿಕೆ ಮತ್ತು ಕೃತಕ ಬುದ್ಧಿಮತ್ತೆ ನಮ್ಮ ಜೀವನವನ್ನು ಪರಿವರ್ತಿಸುತ್ತಿದೆ’ ಎಂದು ತಿಳಿಸಿದರು.
ಪಿಇಎಸ್ ವೈದ್ಯಕೀಯ ಕಾಲೇಜಿನ ಸಹಾಯಕ ವೈದ್ಯಕೀಯ ನಿರ್ದೇಶಕಿ ಡಾ. ರೂಪಾ ಸುರೇಶ್, ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಜೆ.ಸೂರ್ಯಪ್ರಸಾದ್, ಸಮ-ಕುಲಪತಿ ಡಾ.ನಾಗಾರ್ಜುನ ಸಾದಿನೇನಿ, ಡೀನ್ ಡಾ. ಹರಿಪ್ರಸಾದ್, ವೈದ್ಯಕೀಯ ಅಧೀಕ್ಷಕ ಡಾ. ಮಂಜುನಾಥ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.