ADVERTISEMENT

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 20:53 IST
Last Updated 21 ಫೆಬ್ರುವರಿ 2026, 20:53 IST
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ   

ಬೆಂಗಳೂರು: ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಹೂಡಿರುವ ಮಾನಹಾನಿ  ಪ್ರಕರಣದ ಅಪರಾಧವನ್ನು ವಿಚಾರಣೆಗೆ ಪರಿಗಣಿಸಿರುವ ಆದೇಶ ಪ್ರಶ್ನಿಸಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಈ ಸಂಬಂಧ, ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ಪ್ರಕಟಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT