ಬೆಂಗಳೂರು: ಭಾರತೀಯ ಸಮೂಹ ಮಾಧ್ಯಮ ಮತ್ತು ಸಂಶೋಧನಾ ಸಂಸ್ಥೆ (ಐಎಂಎಸ್‌ಆರ್) ನೀಡುವ ‘ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ’ಗೆ ‘ಉದಯವಾಣಿ’ ವರದಿಗಾರ ವಿಜಯಕುಮಾರ್ ಚಂದರಗಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹ 5 ಸಾವಿರ ನಗದು, ಫಲಕವನ್ನು ಒಳಗೊಂಡಿದೆ. ಧಾರವಾಡದವರಾದ ವಿಜಯಕುಮಾರ್ ಚಂದರಗಿ, ಶಿವಮೊಗ್ಗ ಸೇರಿದಂತೆ ವಿವಿಧೆಡೆ ಕೆಲಸ ಮಾಡಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ತುಮಕೂರು ಜಿಲ್ಲೆಯ ರೋಹಿತ್ ಅವರು, ‘ಟೈಮ್ಸ್ ಆಫ್ ಇಂಡಿಯಾ’ ಸೇರಿದಂತೆ ವಿವಿಧ ಆಂಗ್ಲ ಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಮೃತ ರೋಹಿತ್ ಅವರ ಹೆಸರಿನಲ್ಲಿ ಅವರ ತಂದೆ ರಾಜಣ್ಣ ಮತ್ತು ತಾಯಿ ಲಲಿತಾ ಅವರು ಈ ಪ್ರಶಸ್ತಿ ಸ್ಥಾಪಿಸಿದ್ದಾರೆ
ಜುಲೈ 5ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಚ್.ಆರ್. ಶ್ರೀಶ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.