ADVERTISEMENT

ರೌಡಿಶೀಟರ್ ಕೊಲೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2020, 19:28 IST
Last Updated 30 ಅಕ್ಟೋಬರ್ 2020, 19:28 IST

ಆನೇಕಲ್: ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಅತ್ತಿಬೆಲೆ ಪೊಲೀಸ್‌ ಠಾಣೆ ವ್ಯಾಪ್ತಿ ಶೆಟ್ಟಿಹಳ್ಳಿ ಗೇಟ್‌ ಬಳಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಬೆಸ್ತಮಾನಹಳ್ಳಿ ವಿನುತ್‌ (22) ಎಂದು ಗುರುತಿಸಲಾಗಿದೆ. ವಿನುತ್‌ ಅತ್ತಿಬೆಲೆ ಸಮೀಪದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಬೆಳಿಗ್ಗೆ ಕೆಲಸಕ್ಕಾಗಿ ಹೊರಟಿದ್ದಾಗ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದ ದುಷ್ಕರ್ಮಿಗಳು ವಿನುತ್‌ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ.

ಅತ್ತಿಬೆಲೆ ಪೊಲೀಸ್‌ ಠಾಣೆಯಲ್ಲಿ ವಿನುತ್‌ನನ್ನು ರೌಡಿಶೀಟರ್‌ ಎಂದು ಗುರುತಿಸಲಾಗಿದೆ. ಗಲಾಟೆ, ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ.ಡಿ.ಚನ್ನಣ್ಣನವರ್‌, ಎಎಸ್ಪಿ ಲಕ್ಷ್ಮೀಗಣೇಶ್, ಅತ್ತಿಬೆಲೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಸತೀಶ್ ಭೇಟಿ ಸ್ಥಳಕ್ಕೆ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.