ಬೆಂಗಳೂರು: ರೌಡಿಶೀಟರ್ ಕುಣಿಗಲ್ ಗಿರಿಯನ್ನು ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಗಿರಿ ಬಾಡಿಗೆ ಮನೆ ಮಾಡಿಕೊಂಡಿದ್ದ. ಇದರ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ಎಚ್ಚೆತ್ತ ಪೊಲೀಸರು, ಗಿರಿ ಹಾಗೂ ಆತನ ಸಹಚರ ಹರೀಶ್‌ನನ್ನು ವಶಕ್ಕೆ ಪಡೆದು ಬಂಧಿಸಿದರು ಎಂದು ಮೂಲಗಳು ತಿಳಿಸಿವೆ.
‘ಎಲ್ಲಿಯೂ ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ಏಕೆ ಬಂಧಿಸಲು ಬಂದಿದ್ದೀರಿ ಎಂಬುದಾಗಿ ಪೊಲೀಸರನ್ನು ಗಿರಿ ಪ್ರಶ್ನೆ ಮಾಡಿದ’ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.