ADVERTISEMENT

ಬೆಂಗಳೂರು | ಅಪರಾಧ ಕೃತ್ಯ ಎಸಗಲು ಹೊಂಚು: ರೌಡಿ ಸೇರಿ ಆರು ಮಂದಿ ಸೆರೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 23:30 IST
Last Updated 16 ಸೆಪ್ಟೆಂಬರ್ 2025, 23:30 IST
ಮೌಲಾ 
ಮೌಲಾ    

ಬೆಂಗಳೂರು: ಪಿಸ್ತೂಲ್‌ ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಅಪರಾಧ ಕೃತ್ಯ ಎಸಗಲು ಹೊಂಚು ಹಾಕುತ್ತಿದ್ದ ರೌಡಿ ಸೇರಿ ಏಳು ಆರೋಪಿಗಳನ್ನು ಸಿಸಿಬಿಯ ಸಂಘಟಿತ ಅಪರಾಧ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮೌಲಾ ಅಲಿಯಾಸ್ ಡಾಂಬರ್ ಮೌಲಾ (40) ಸೈಯದ್ ಇಸಾಕ್‌, ಅಪ್ಸರ್ ಬಾಷಾ, ಶಹಬಾಜ್‌, ಇಬ್ರಾಹಿಂ, ಪರಮಾನ್‌, ಸೈಯದ್ ಸದ್ದಾಂ ಬಂಧಿತರು.

ಬಂಧಿತರಿಂದ ಪಿಸ್ತೂಲ್, ಮಾರಕಾಸ್ತ್ರ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಮೌಲಾ ವಿರುದ್ಧ ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ರೌಡಿ ಪಟ್ಟಿ ತೆರೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಸೆ.10ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಹಳ್ಳಿ ಕ್ರಾಸ್‌ನಲ್ಲಿ ಪಿಸ್ತೂಲ್‌ ಹಾಗೂ ಮಾರಕಾಸ್ತ್ರ ಹಿಡಿದು ಎದುರಾಳಿ ತಂಡದ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊಂಚು ಹಾಕುತ್ತಿದ್ದ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಆರೋಪಿಗಳ ಪೈಕಿ ಸೈಯದ್ ಸದ್ದಾಂ ಎಂಬಾತ ಪಿಸ್ತೂಲ್‌ ತರಿಸಿಕೊಂಡಿದ್ದ. ಎಲ್ಲಿಂದ ಪಿಸ್ತೂಲ್‌ ತರಲಾಗಿತ್ತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಸದ್ದಾಂ 
ಆರೋಪಿಗಳಿಂದ ಜಪ್ತಿ ಮಾಡಿಕೊಂಡ ಪಿಸ್ತೂಲ್‌ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.