ADVERTISEMENT

ರೌಡಿ ಕೊಲೆ: ಇಬ್ಬರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 14:45 IST
Last Updated 15 ಜನವರಿ 2026, 14:45 IST
<div class="paragraphs"><p>ವಶ (ಪ್ರಾತಿನಿಧಿಕ ಚಿತ್ರ)</p></div>

ವಶ (ಪ್ರಾತಿನಿಧಿಕ ಚಿತ್ರ)

   

ಬೆಂಗಳೂರು: ರೌಡಿ ಸೈಯದ್‌ ಶಬ್ಬೀರ್ (30) ಅವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು ಬಂಡೇಪಾಳ್ಯ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಬಂಡೇಪಾಳ್ಯದ ಮಂಗಮ್ಮನಪಾಳ್ಯದಲ್ಲಿ ಮಂಗಳವಾರ ರಾತ್ರಿ ಸೈಯದ್ ಅವರ ಮುಖದ ಮೇಲೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ಆರೋಪಿಗಳು ಪರಾರಿ ಆಗಿದ್ದರು. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಹಾಗೂ ಮೊಬೈಲ್‌ ಕರೆಗಳ ವಿವರ ಆಧರಿಸಿ ಶಂಕಿತರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಶಬ್ಬೀರ್ ಅವರು ಮಂಗಳವಾರ ರಾತ್ರಿ ಸ್ನೇಹಿತರೊಂದಿಗೆ ಆಟೊದಲ್ಲಿ ಮಂಗಮ್ಮನಪಾಳ್ಯಕ್ಕೆ ತೆರಳುತ್ತಿದ್ದರು. ಆಗ ದುಷ್ಕರ್ಮಿಗಳ ತಂಡವು ಆಟೊ ಅಡ್ಡಗಟ್ಟಿ ಕೊಲೆ ಮಾಡಿತ್ತು. ಹಳೆ ದ್ವೇಷವೇ ಕೃತ್ಯ ಎಸಗಲು ಕಾರಣ ಎಂಬುದು ಕಂಡುಬಂದಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.